Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:9 - ಕನ್ನಡ ಸಮಕಾಲಿಕ ಅನುವಾದ

9 ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು - ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಾಣಬರುವದಿಲ್ಲ; ಆತ್ಮವಾಗಲಿ ದೇವದೂತನಾಗಲಿ ಅವನ ಸಂಗಡ ಮಾತಾಡಿದ್ದರೂ ಮಾತಾಡಿರಬಹುದು ಎಂದು ವಾಗ್ವಾದಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಥೈ ಲೈ ಆವಾಜ್ ಹೊಲೊ, ಫಾರಿಜೆವಾಂಚ್ಯಾ ತಾಂಡಾತ್ಲಿ ಥೊಡಿ ಲೊಕಾ ಧರ್ಮ ಶಿಕಾಪಾ ಕರ್ತಲೆ ಉಟುನ್ ಇಬೆ ರಾವ್ನ್ ಹ್ಯಾ ಮಾನ್ಸಾಕ್ಡೆ ಅಮ್ಕಾ ಕಾಯ್ಬಿ ಚುಕ್‍ ದಿಸುನ್ ಯೆಯ್ನಾ ಹೊಲಾ! ಕಾಯ್ಕಿ ತೆಚ್ಯಾ ವಾಂಗ್ಡಾ ಬೊಲುಕ್ ಫಿರೆ ಮನುನ್ ವಾದ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:9
23 ತಿಳಿವುಗಳ ಹೋಲಿಕೆ  

ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.


ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.


ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.


ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.


ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.


ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,


ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.


ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ಪಿಲಾತನು ಮೂರನೆಯ ಸಾರಿ ಅವರಿಗೆ, “ಏಕೆ? ಈತನು ಮಾಡಿದ ಅಪರಾಧವೇನು? ಈತನಲ್ಲಿ ಮರಣದಂಡನೆಗೆ ಕಾರಣವಾದದ್ದೇನೂ ನನಗೆ ಕಾಣಲಿಲ್ಲ. ಆದ್ದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.


ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.


ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.


ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.


ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು.


ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.


“ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು