ಅಪೊಸ್ತಲರ ಕೃತ್ಯಗಳು 24:10 - ಕನ್ನಡ ಸಮಕಾಲಿಕ ಅನುವಾದ10 ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇಶಾಧಿಪತಿಯು ಪೌಲನಿಗೆ - ನೀನು ಮಾತಾಡಬಹುದೆಂದು ಸನ್ನೆಮಾಡಲು ಅವನು ಪ್ರತ್ಯುತ್ತರವನ್ನು ಹೇಳಿದ್ದೇನಂದರೆ - ನೀನು ಅನೇಕ ವರುಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ರಾಜ್ಯ್ ಪಾಲಾನ್ ಪಾವ್ಲುಕ್ ಸೊನ್ನಾಯ್ ಕರುನ್ ಬೊಲುಕ್ ಲಾವ್ಲ್ಯಾನ್, ತನ್ನಾ ಪಾವ್ಲುನ್ ಸಾಂಗಲ್ಲೆ ಕಾಯ್ ಮಟ್ಲ್ಯಾರ್: ರಾಜ್ಯ್ ಪಾಲ್ ಫೆಲಿಕ್ಸಾ, ತಿಯಾ ಲೈ ವರ್ಸಾಂಚ್ಯಾಕ್ನಾ ಹ್ಯಾ ದೆಶ್ಯಾಕ್ ಝಡ್ತಿ ಕರ್‍ತಲೊ ಹೊವ್ನ್ ಹಾಸ್ ಮನ್ತಲೆ ಮಾಕಾ ಗೊತ್ತ್ ಹಾಯ್, ತಸೆ ಹೊವ್ನ್, ಮಿಯಾ ಮಾಜ್ಯಾ ಬಚಾವಾ ಸಾಟ್ನಿ ತುಜ್ಯಾ ಇದ್ರಾಕ್ ವಾದ್ ಕರ್ತಾ. ಅಧ್ಯಾಯವನ್ನು ನೋಡಿ |