ಅಪೊಸ್ತಲರ ಕೃತ್ಯಗಳು 24:22 - ಕನ್ನಡ ಸಮಕಾಲಿಕ ಅನುವಾದ22 ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಫೇಲಿಕ್ಸನು ಈ ಮಾರ್ಗವನ್ನು, ತಕ್ಕ ಮಟ್ಟಿಗೆ ತಿಳಿದವನಾಗಿದ್ದರೂ ಅವರಿಗೆ; “ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿನ್ನ ಪ್ರಕರಣವನ್ನು ತೀರ್ಮಾನಿಸುತ್ತೇನೆಂದು” ಹೇಳಿ, ವಿಚಾರಣೆಯನ್ನು ತಡೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಫೇಲಿಕ್ಸನು ಕ್ರಿಸ್ತ ಮಾರ್ಗವನ್ನು ತಕ್ಕ ಮಟ್ಟಿಗೆ ತಿಳಿದವನಾದರೂ ಅವರಿಗೆ - ಸಹಸ್ರಾಧಿಪತಿಯಾದ ಲೂಸ್ಯನು ಬಂದ ಮೇಲೆ ನಿಮ್ಮ ಕಾರ್ಯವನ್ನು ತೀರ್ಮಾನಿಸುತ್ತೇನೆಂದು ಹೇಳಿ ವಿಚಾರಣೆಯನ್ನು ತಡೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಫೆಲಿಕ್ಸಾನ್ ಜೆಜುಚ್ಯಾ ವಾಟೆಚ್ಯಾ ವಿಶಯಾಚ್ಯಾ ಅದ್ದಿಚ್ ಪಾಜೆ ತವ್ಡೆ ಅರ್ಥ್ ಕರುನ್ ಘೆಟಲ್ಯಾನ್ ಅನಿ ತೆನಿ ಇಚಾರ್ನೆ ಹೊತಲೆ ಅರ್ದ್ಯಾಕುಚ್ ಇಬೆಕರುನ್ “ಸೈನಿಕಾಂಚೊ ಮುಖಂಡ್ ಲುಸಿಯಾ ಹಿತ್ತೆ ಯೆಲ್ಲ್ಯಾ ತನ್ನಾ ಮಿಯಾ ನಿರ್ದಾರ್ ಕರ್‍ತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |