Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:24 - ಕನ್ನಡ ಸಮಕಾಲಿಕ ಅನುವಾದ

24 ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕೆಲವು ದಿನಗಳ ನಂತರ ಫೆಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರುಸಿಲ್ಲಳೊಂದಿಗೆ ಬಂದು ಪೌಲನನ್ನು ತನ್ನ ಬಳಿಗೆ ಕರೆಯಿಸಿದನು. ಕ್ರಿಸ್ತಯೇಸುವನ್ನು ವಿಶ್ವಾಸಿಸುವ ಬಗ್ಗೆ ಪೌಲನಾಡಿದ ಮಾತುಗಳನ್ನು ಆಲೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕೆಲವು ದಿವಸಗಳಾದ ಮೇಲೆ ಫೇಲಿಕ್ಸನು ಯೆಹೂದ್ಯಳಾದ ದ್ರೂಸಿಲ್ಲಳೆಂಬ ಸ್ವಂತ ಹೆಂಡತಿಯೊಂದಿಗೆ ಬಂದು ಪೌಲನನ್ನು ಕರಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಥೊಡಿ ದಿಸಾ ಹೊಲ್ಲ್ಯಾ ಮಾನಾ ಫೆಲಿಕ್ಸ್ ಆಪ್ಲಿ ಬಾಯ್ಕೊ ದ್ರುಸಿಲ್ಲ್ಯಾ ವಾಂಗ್ಡಾ ಯೆಲೊ. ತಿ ಜುದೆವಾಂಚಿ ಹೊಲ್ಲಿ ಫೆಲಿಕ್ಸಾನ್ ಪಾವ್ಲುಕ್ ಬಲ್ವುಕ್ ಲಾವ್ಲ್ಯಾನ್, ಅನಿ ಕ್ರಿಸ್ತ್ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ವಿಶಯಾತ್ ಪಾವ್ಲುನ್ ಸಾಂಗಲೆ ತೆನಿ ಆಯ್ಕಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:24
13 ತಿಳಿವುಗಳ ಹೋಲಿಕೆ  

ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.


ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರಿಂದಾಗುವ ಸೂಚಕಕಾರ್ಯವನ್ನು ಕಾಣಲು ನಿರೀಕ್ಷಿಸುತ್ತಿದ್ದನು.


ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.


ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.


ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು