Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:6 - ಕನ್ನಡ ಸಮಕಾಲಿಕ ಅನುವಾದ

6 ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಅವರಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿವಸಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕೂತುಕೊಂಡು ಪೌಲನನ್ನು ತರಬೇಕೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫೆಸ್ತಾ ಅನಿಬಿ ಆಟಾಕ್ನಾ ಧಾ ದಿಸಾ ಪತರ್ ಜೆರುಜಲೆಮಾತುಚ್ ರಾವ್ನ್, ಮಾನಾ ತೊ ಸೆಜರೆಯಾಕ್ ಪರ್ತುನ್ ಗೆಲೊ, ದುಸ್ರೆಂದಿಸಿ ತೆನಿ ಪಾವ್ಲುಕ್ ಬಲ್ವುನ್ ಹಾನುನ್ ಅಪ್ನಾಚ್ಯಾ ಫಿಡ್ಯಾತ್ ಇಬೆಕರಾ ಮನುನ್ ಸೈನಿಕಾಕ್ನಿ ಸಾಂಗ್ಲಾನ್, ಅನಿ ತೊ ಝಡ್ತಿ ಕರ್‍ತಲ್ಯಾ ಸಿವಾಸನಾರ್ ಬಸುನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:6
11 ತಿಳಿವುಗಳ ಹೋಲಿಕೆ  

ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ.


ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.


ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.


ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.


ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.


ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ.


ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು