Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:7 - ಕನ್ನಡ ಸಮಕಾಲಿಕ ಅನುವಾದ

7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಾವ್ಲು ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಯೆಲೊ ಜೆರುಜಲೆಮಾತ್ನಾ ಜುದೆವಾಂಚಿ ಲೊಕಾ ತೆಚ್ಯಾ ಆಜುಭಾಜುಕ್ ಇಬೆ ರ್‍ಹಾವ್ನ್ ಲೈ ಚುಕ್ ಸಾಂಗುಲಾಗ್ಲೆ ತ್ಯಾತುರ್‍ಲೆ ಎಕ್ಬಿ ಖರೆ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:7
16 ತಿಳಿವುಗಳ ಹೋಲಿಕೆ  

ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.


ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ.


ಮುಖ್ಯಯಾಜಕರೂ ನಿಯಮ ಬೋಧಕರು ನಿಂತುಕೊಂಡು ಬಲವಾಗಿ ಯೇಸುವಿನ ಮೇಲೆ ದೂರುಗಳನ್ನು ಹೇಳುತ್ತಿದ್ದರು.


ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.


ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.


ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.


ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.


ಯೆರೂಸಲೇಮಿನಿಂದ ಫರಿಸಾಯರು ಮತ್ತು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದು,


ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು