ಅಪೊಸ್ತಲರ ಕೃತ್ಯಗಳು 26:10 - ಕನ್ನಡ ಸಮಕಾಲಿಕ ಅನುವಾದ10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆರೂಸಲೇವಿುನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆರುಜಲೆಮಾತ್ ದೆವಾಚ್ಯಾ ಲೊಕಾಕ್ನಿ ವಿರೊಧ್ ಹೊವ್ನ್ ಲೈ ಕಾಮಾ ಕರಲ್ಲೊ ಹ್ಯಾ ದೆವಾಚ್ಯಾ ಲೊಕಾಕ್ನಿ ಬಂದಿಖಾನ್ಯಾತ್ ಘಾಲುಕ್ ಮುಖ್ಯ್ ಯಾಜಕಾನಿ ಮಾಕಾ ಅಧಿಕಾರ್ ದಿಲ್ಯಾನಿ, ಜೆಜುಚ್ಯಾ ಸಿಸಾಕ್ನಿ ಜಿವಾನಿ ಮಾರಲ್ಲ್ಯಾ ತನ್ನಾ ಮಿಯಾ ತೆಕಾ ಒಪ್ಗಿ ದಿಲೊ. ಅಧ್ಯಾಯವನ್ನು ನೋಡಿ |