ಅಪೊಸ್ತಲರ ಕೃತ್ಯಗಳು 26:2 - ಕನ್ನಡ ಸಮಕಾಲಿಕ ಅನುವಾದ2 “ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ಆರೋಪಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವುದರಿಂದ, ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅಗ್ರಿಪ್ಪರಾಜನೇ, ಯೆಹೂದ್ಯರು ನನ್ನ ಮೇಲೆ ಆರೋಪಿಸುವ ಎಲ್ಲಾ ದೋಷಗಳ ವಿಷಯವಾಗಿ ನಿನ್ನ ಎದುರಿನಲ್ಲಿ ನಾನು ಈಹೊತ್ತು ಪ್ರತಿವಾದ ಮಾಡಬೇಕಾಗಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ರಾಜನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆಲ್ಲಾ ನಾನು ಉತ್ತರಕೊಡುವೆನು. ಇಂದು ನಿನ್ನ ಮುಂದೆ ನಿಂತುಕೊಂಡು ಪ್ರತಿವಾದ ಮಾಡುವ ಅವಕಾಶ ದೊರೆತಿರುವುದು ನನ್ನ ಭಾಗ್ಯವೆಂದೇ ಎಣಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಅಗ್ರಿಪ್ಪ್ ರಾಜಾ, ಜುದೆವಾಂಚ್ಯಾ ಲೊಕಾನಿ ಮಾಜ್ಯಾ ವರ್‍ತಿ ಘಾಟಲ್ಲ್ಯಾ ಸಗ್ಳ್ಯಾ ಅಪವಾದಾಕ್ನಿ ಮಿಯಾ ಜವಾಬ್ ದಿತಾ, ಆಜ್ ತುಜ್ಯಾ ಇದ್ರಾಕ್ ಇಬೆ ರಾವ್ನ್ ಪ್ರತಿವಾದ್ ಕರುಕ್ ಮಾಕಾ ಅವಕಾಸ್ ಗಾವ್ತಲಿ ಮಾಜಿ ಭಾಗ್ಯ್ ಮನುನ್ ಯೆವಜ್ತಾ ಅಧ್ಯಾಯವನ್ನು ನೋಡಿ |