Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತ್ಯಾ ದಿಸ್ಸಾತ್ನಿ ದೆವಾನ್ ಮಾಕಾ ಮಜತ್ ಕರ್‍ಲ್ಯಾನ್. ತೊ ಮಾಕಾ ಆಜ್ ಪತರ್ ಮಜತ್ ಕರುನ್ಗೆತ್ ಹಾಯ್, ತೆಚಾಸಾಟ್ನಿ ಮಿಯಾ ಆಜ್ ಹಿತ್ತೆ ಇಬೆ ಹಾವ್, ಅನಿ ಮಿಯಾ ಬಗಟಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗಿನಸ್ತಾನಾ, ಮೊಯ್ಜೆಚ್ಯಾ ಅನಿ ಪ್ರವಾದಿಂಚ್ಯಾ ಇದ್ರಾಕ್ ಖರೆ ಕರ್‍ತಾ ಮನುನ್ ಸಾಂಗಲ್ಲಿ ಸಂಗ್ತಿಯಾ ಸಗ್ಳ್ಯಿ ಸಾಂಗುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:22
42 ತಿಳಿವುಗಳ ಹೋಲಿಕೆ  

ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ.


ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು.


ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ


ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು.


ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ. ನಾವು ಬೆಂಕಿಯನ್ನೂ ನೀರನ್ನೂ ದಾಟುವಂತೆ ಮಾಡಿದ್ದೀರಿ. ಆದರೆ ನೀವು ನಮ್ಮನ್ನು ಸಮೃದ್ಧಿಯ ಸ್ಥಳದೊಳಗೆ ಬರಮಾಡಿದ್ದೀರಿ.


ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.


ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.


ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು