Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಲ್ಲದೆ ಚಳಿಗಾಲವನ್ನು ಕಳೆಯಲು ಆ ಬಂದರು ಹಿತಕರವಾಗಿರಲಿಲ್ಲ. ಆದ್ದರಿಂದ ಅಲ್ಲಿಂದ ಹೊರಟು, ಸಾಧ್ಯವಾದರೆ, ಫೆನಿಕ್ಸ್ ಎಂಬ ಊರನ್ನು ಸೇರಿ, ಅಲ್ಲೇ ಚಳಿಗಾಲವನ್ನು ಕಳೆಯಬಹುದೆಂದು ಹೆಚ್ಚುಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. ಫೆನಿಕ್ಸ್, ಕ್ರೇಟ್ ದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ರೇವು ಹಿಮಕಾಲವನ್ನು ಕಳೆಯುವದಕ್ಕೆ ಅನುಕೂಲವಲ್ಲದ್ದರಿಂದ ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ ಅಲ್ಲೇ ಆ ಹಿಮಕಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ಆಲೋಚನೆ ಹೇಳಿದರು. ಫೊಯಿನಿಕ್ಸವು ಕ್ರೇತದ್ವೀಪದ ಒಂದು ರೇವು; ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಲೈ ಲೊಕಾನಿ ಥಂಡೆಚಿ ದಿಸಾ ಕಳ್ದುಕ್ ಫೆಲಿಕ್ಸಾಕ್ ಜಾವ್ನ್ ಪಾವ್ಚೆ ಮನುನ್ ಕಟ್ಪಟ್ಲ್ಯಾನಿ ,ಫೆಲಿಕ್ಸಾಮನ್ತಲೊ ಢೊನ್ ಇಬೆರಾತಲೊ ಜಾಗೊ ಕ್ರೆಟ್ ದ್ವಿಪಾತ್ ಹೊತ್ತೊ, ತೊ ತ್ಯಾ ಎಳಾರ್ ಢೊನ್ ಚಾಲ್ವುಕ್ ವಾರೊ ಮಾರ್‍ತಲ್ಯಾ ದಿಕ್ಕಾಕ್ಡೆ ತೊಂಡ್ ಕರುನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:12
8 ತಿಳಿವುಗಳ ಹೋಲಿಕೆ  

ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.


ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.


ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.


ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.


ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.


ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.


ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


“ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು