Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅದ್ರಮಿತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವುದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಆ ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅಮಿ ಢೊನಿತ್ ಚಡುನ್ ಜಾವ್ಕ್ ಲಾಗ್ಲಾಂವ್ ತಿ ಢೊನಿ ಅದ್ರಮಿತ್ತಿ ಶಾರಾಕ್ನಾ ಯೆಲ್ಲಿ ಅನಿ ಎಶ್ಯಾ ಪ್ರಾಂತ್ಯಾಂಚ್ಯಾ ದುಸ್ರ್ಯಾ ದುಸ್ರ್ಯಾ ಗಾಂವಾಕ್ನಿ ಜಾವ್ಕ್ ತಯಾರ್ ಹೊಲ್ಲಿ, ಮೆಸೆದೊನಿಯಾಚ್ಯಾ ಥೆಸಲೊನಿತ್ಲೊ ಅರಿಸ್ತಾರ್ಕ್ ಮನ್ತಲೊ ಅಮ್ಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:2
17 ತಿಳಿವುಗಳ ಹೋಲಿಕೆ  

ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.


ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.


ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.


ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.


ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.


ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.


ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,


ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು