Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:22 - ಕನ್ನಡ ಸಮಕಾಲಿಕ ಅನುವಾದ

22 ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವುದೇ ಹೊರತು, ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಗಲಾದರೂ ಧೈರ್ಯದಿಂದಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಹಡಗು ನಾಶವಾಗುವುದೇ ಹೊರತು, ನಿಮ್ಮಲ್ಲಿ ಯಾರಿಗೂ ಪ್ರಾಣಹಾನಿ ಆಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಈಗಲಾದರೂ ನೀವು ಧೈರ್ಯದಿಂದಿರಬೇಕೆಂದು ನಿಮಗೆ ಬುದ್ಧಿಹೇಳುತ್ತೇನೆ; ಹಡಗು ನಷ್ಟವಾಗುವದೇ ಹೊರತು ನಿಮ್ಮಲ್ಲಿ ಒಬ್ಬರಿಗೂ ಪ್ರಾಣನಷ್ಟವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈಗಲಾದರೋ ನೀವು ಸಂತೋಷದಿಂದ ಇರಬೇಕೆಂದು ನಾನು ನಿಮಗೆ ಹೇಳುತ್ತಿದ್ದೇನೆ. ನಿಮ್ಮಲ್ಲಿ ಒಬ್ಬರೂ ಸಾಯುವುದಿಲ್ಲ! ಆದರೆ ಹಡಗು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅತ್ತಾ ತರಿ ತುಮಿ ಉಮ್ಮೆದಿನ್ ರ್‍ಹಾವಾ ದೆವ್ ತುಮ್ಚ್ಯಾ ವಾಂಗ್ಡಾ ಹಾಯ್ ಮನುನ್ ಮಿಯಾ ತುಮ್ಕಾ ಸಾಂಗುಲ್ಲಾ ತುಮ್ಚ್ಯಾತ್ಲೊ ಎಕ್ಲೊಬಿ ಮರಿನಾತ್ ಖರೆ ಢೊನ್ ನಾಸ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:22
14 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.


ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.


ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.


ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.


ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.


ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.


ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು