Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:29 - ಕನ್ನಡ ಸಮಕಾಲಿಕ ಅನುವಾದ

29 ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬಂಡೆಗಳಿಗೆ ಡಿಕ್ಕಿಹೊಡೆದೆವೋ ಎಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಬಿಟ್ಟು ಬೇಗ ಬೆಳಗಾಗಲಿ ಎಂದು ಪ್ರಾರ್ಥಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಮ್ಮ ಹಡಗು ಕಲ್ಲುಬಂಡೆಗಳನ್ನು ತಾಕಬಹುದೆಂಬ ದಿಗಿಲು ಉಂಟಾಯಿತು. ಆದುದರಿಂದ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ ಬೆಳಗಾಗಲೆಂದು ಹಾರೈಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಬಂಡೇಸ್ಥಳವನ್ನು ತಾಕೇವೆಂದು ಭಯಪಟ್ಟು ಹಡಗಿನ ಹಿಂಭಾಗದಿಂದ ನಾಲ್ಕು ಲಂಗರಗಳನ್ನು ಬಿಟ್ಟು ಯಾವಾಗ ಬೆಳಗಾದೀತು ಎಂದು ಹಾರೈಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಹಡಗು ಬಂಡೆಗೆ ಅಪ್ಪಳಿಸಬಹುದೆಂದು ನಾವಿಕರು ಭಯಪಟ್ಟರು. ಆದ್ದರಿಂದ ಅವರು ನಾಲ್ಕು ಲಂಗರುಗಳನ್ನು ನೀರಿನೊಳಗೆ ಇಳಿಯಬಿಟ್ಟರು. ಬಳಿಕ ಅವರು ಬೆಳಗಾಗಲೆಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಢೊನಿ ಜಾವ್ನ್ ಮೊಟ್ಯಾ ಗುಂಡ್ಯಾಕ್ ಆದಳ್ತಾ ಮನುನ್ ಚಾಲ್ವುತಲಿ ಲೊಕಾ ಭಿಂಯಾಲಿ, ತಸೆ ಹೊವ್ನ್ ತೆನಿ ಪಾನಿಯಾತ್ ಚಾರ್ ಢೊನಾಕ್ ಭಾಂದುನ್ ಥವ್ತಲೆ ಗೊಕ್ಕೆ ಸೊಡ್ಲ್ಯಾನಿ, ಅನಿ ಲಗ್ಗುನಾ ಉಜ್ವಾಡುಂದಿತ್ ಮನುನ್ ಮಾಗ್ನಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:29
8 ತಿಳಿವುಗಳ ಹೋಲಿಕೆ  

ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.


ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು.


ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.


ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ.


ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು