Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:43 - ಕನ್ನಡ ಸಮಕಾಲಿಕ ಅನುವಾದ

43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು - ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲಾಗಿ ತೀರಕ್ಕೆ ಹೋಗಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆದರೆ ಸೇನಾಧಿಕಾರಿಯಾದ ಜೂಲಿಯಸನು ಪೌಲನನ್ನು ಉಳಿಸಲಪೇಕ್ಷಿಸಿ ಕೈದಿಗಳನ್ನು ಕೊಲ್ಲಲು ಸೈನಿಕರಿಗೆ ಅಪ್ಪಣೆ ಕೊಡಲಿಲ್ಲ. ಈಜು ಬಲ್ಲವರೆಲ್ಲರು ನೀರಿಗೆ ಧುಮುಕಿ ಈಜಿಕೊಂಡು ದಡಕ್ಕೆ ಹೋಗಬೇಕೆಂದು ಜೂಲಿಯಸನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಖರೆ ಸೈನಿಕಾಂಚೊ ಅಧಿಕಾರಿಕ್ ಪಾವ್ಲುಕ್ ಹುರ್ವ್ವುಚೆ ಹೊತ್ತೆ, ತಸೆ ಹೊವ್ನ್, ತೆನಿ ತೆಂಕಾ ಚೊರಾಂಚೊ ಜಿವ್ ಕಾಡುಕ್ ಸೊಡುಕ್ನಾ ಹೆಚ್ಯಾ ಬದ್ಲಾಕ್ ತೆನಿ ಪೆವುಕ್ ಯೆತಲೆ ಸಗ್ಳೆ ಹುಡುನ್ ಪೆವುನ್ಗೆತ್ ದಂಡೆಕ್ ಪಾವಾ ಮನುನ್ ಹುಕುಮ್ ದಿಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:43
8 ತಿಳಿವುಗಳ ಹೋಲಿಕೆ  

ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.


ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.


ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.


ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.


ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.


ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.


ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.


ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು