Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:17 - ಕನ್ನಡ ಸಮಕಾಲಿಕ ಅನುವಾದ

17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:17
11 ತಿಳಿವುಗಳ ಹೋಲಿಕೆ  

ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.


ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.


ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.


ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.


ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು.


ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.


ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು