Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:22 - ಕನ್ನಡ ಸಮಕಾಲಿಕ ಅನುವಾದ

22 ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ತುಜಿ ಅಭಿಪ್ರಾಯ್ ತುಜ್ಯಾ ತೊಂಡಾನ್ ಆಯ್ಕುಕ್ ಆಶ್ಯಾ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್, ಸಗ್ಳ್ಯಾ ಕಡೆ ಲೊಕಾ ತಿಯಾ ಮಿಳುನ್ ಹೊತ್ತ್ಯಾ ಪಕ್ಷಾಕ್ ವಿರೊದ್ ಬೊಲುಲ್ಲಾತ್ ಹೆ ಆಮ್ಕಾ ಗೊತ್ತ್ ಹಾಯ್, ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:22
14 ತಿಳಿವುಗಳ ಹೋಲಿಕೆ  

ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.


ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.


ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.


ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.


ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು