Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:28 - ಕನ್ನಡ ಸಮಕಾಲಿಕ ಅನುವಾದ

28 “ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಅನಿ ಪಾವ್ಲುನ್ ದೆವಾಚ್ಯಾ ರಾಕ್ವನಾಚಿ ಬರಿ ಖಬರ್ ಜುದೆವಾಂಚೆ ನ್ಹಯ್ ಹೊಲ್ಲ್ಯಾಕ್ನಿ ಸಾಟ್ನಿ ಧಾಡುನ್ ಹೊಲಾ ತೆನಿ ತೆ ಆಯ್ಕ್ ತಾತ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್! ಮನುನ್ ಸಾಂಗುನ್ಗೆತ್ ಬೊಲ್ನೆ ಸಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:28
26 ತಿಳಿವುಗಳ ಹೋಲಿಕೆ  

“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’ ”


ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’


ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.


ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.


“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.


ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.


ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು