Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:3 - ಕನ್ನಡ ಸಮಕಾಲಿಕ ಅನುವಾದ

3 ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ, ತಂದು ಬೆಂಕಿಯ ಮೇಲೆ ಹಾಕಲು, ಆ ಶಾಖಕ್ಕೆ ಒಂದು ಸರ್ಪವು ಹೊರಗೆ ಬಂದು, ಅವನ ಕೈಯನ್ನು ಬಿಗಿಯಾಗಿ ಹಿಡಿದುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ತಂದು ಬೆಂಕಿಯ ಮೇಲೆ ಹಾಕುತ್ತಿದ್ದಾಗ ಬೆಂಕಿಯ ಶಾಖಕ್ಕೆ ವಿಷಸರ್ಪವೊಂದು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಲು ಆ ಕಾವಿನ ದೆಸೆಯಿಂದ ಒಂದು ಹಾವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಹಿಡುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಅದನ್ನು ಬೆಂಕಿಯ ಮೇಲೆ ಹಾಕುತ್ತಿರಲು ಅದರ ಕಾವಿನ ದೆಸೆಯಿಂದ ವಿಷದ ಹಾವೊಂದು ಹೊರಗೆ ಬಂದು ಪೌಲನ ಕೈಗೆ ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲುನ್ ಎಕ್ ನಾಕ್ಡಾಂಚೆ ವಜ್ಜೆ ಕರುನ್ ತೆ ಆಗಿರ್ ಥವ್ತಾನಾ ಆಗಿಚ್ಯಾ ಝಳಾಕ್ ಎಕ್ ವಿಶಾಚೊ ಸಾಪ್ ಭಾಯ್ರ್ ಯೆವ್ನ್ ಪಾವ್ಲುಚ್ಯಾ ಹಾತಿಕ್ ಸುತ್ತ್ ಘಾಲುನ್ ಧರುನ್ ಘೆಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:3
13 ತಿಳಿವುಗಳ ಹೋಲಿಕೆ  

“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.


ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.


ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.


ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.


ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು