Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:30 - ಕನ್ನಡ ಸಮಕಾಲಿಕ ಅನುವಾದ

30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತರುವಾಯ ಅವನು ತಾನೇ ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳ ಕಾಲ ಇದ್ದು, ತನ್ನ ಬಳಿಗೆ ಬರುವವರೆಲ್ಲರನ್ನು ಆದರದಿಂದ ಬರಮಾಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತರುವಾಯ ಅವನು ತಾನೇ ಮಾಡಿಕೊಂಡ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರುಷ ಇದ್ದು ತನ್ನ ಬಳಿಗೆ ಬರುವವರೆಲ್ಲರನ್ನು ಸೇರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಪಾವ್ಲು ಅಪ್ನಿ ಬಾಡ್ಯಾಕ್ ಘೆಟಲ್ಯಾ ಘರಾತ್ ಹೊತ್ತೊ, ಅನಿ ಲೈ ಧೈರ್ಯಾನ್, ಅನಿ ಕಸ್ಲಿಬಿ ಅಡ್ಕಳ್ ನಸ್ತಾನಾ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಪ್ರಚಾರ್ ಕರ್ಲಾನ್, ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ಶಿಕಾಪ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:30
14 ತಿಳಿವುಗಳ ಹೋಲಿಕೆ  

ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.


ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.


ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು.


ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.


ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.


ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.


ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಆದರೆ ಅವನು ರೋಮಿನಲ್ಲಿದ್ದಾಗ ಪ್ರಯಾಸದಿಂದ ನನ್ನನ್ನು ಹುಡುಕಿ ಕಂಡುಕೊಂಡನು.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು