Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:7 - ಕನ್ನಡ ಸಮಕಾಲಿಕ ಅನುವಾದ

7 ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಸಮೀಪದಲ್ಲಿ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಪಕ್ಕದಲ್ಲೇ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಸ್ಥಳದ ಸಮೀಪದಲ್ಲಿ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನೆಂಬವನಿಗೆ ಕೆಲವು ಭೂವಿು ಇತ್ತು. ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಸ್ಥಳದ ಸುತ್ತಮುತ್ತ ಕೆಲವು ಹೊಲಗಳು ಇದ್ದವು. ಆ ದ್ವೀಪದ ಪ್ರಮುಖ ವ್ಯಕ್ತಿಯೊಬ್ಬನಿಗೆ ಆ ಹೊಲಗಳು ಸೇರಿದ್ದವು. ಅವನ ಹೆಸರು ಪೊಪ್ಲಿಯ. ಅವನು ನಮ್ಮನ್ನು ತನ್ನ ಮನೆಗೆ ಸ್ವಾಗತಿಸಿದನು. ಪೊಪ್ಲಿಯನು ಕನಿಕರ ತೋರಿದನು. ನಾವು ಅವನ ಮನೆಯಲ್ಲಿ ಮೂರು ದಿನವಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತ್ಯಾ ಜಾಗ್ಯಾರ್ ಅಜುಭಾಜುನ್ ಥೊಡೆ ಸೆತ್ ಹೊತ್ತೆ, ತೆ ಸಗ್ಳೆ ತ್ಯಾ ದ್ವಿಪಾತ್ಲ್ಯಾ ಪೊಪ್ಲಿಯಾ ಮನ್ತಲ್ಯಾ ಎಕ್ ಮೊಟೊ ಅಧಿಕಾರಿಕ್ ಸಮಂದ್ ಪಡಲೆ ಹೊತ್ತೆ, ತೆನಿ ಅಮ್ಕಾ ಅಪ್ಲ್ಯಾ ಘರಾಕ್ ಬಲ್ವುಲ್ಯಾನ್, ಅನಿ ಅಮ್ಕಾ ಲೈ ಕಾಳ್ಜಿ ದಾಕ್ವುಲ್ಯಾನ್ ಅಮಿ ತೆಚ್ಯಾ ಘರಾತ್ ತಿನ್ ದಿಸ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:7
10 ತಿಳಿವುಗಳ ಹೋಲಿಕೆ  

ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.


ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.


ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.


ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು