Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:9 - ಕನ್ನಡ ಸಮಕಾಲಿಕ ಅನುವಾದ

9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇದಾದ ನಂತರ ದ್ವೀಪದಲ್ಲಿದ್ದ ಇತರ ರೋಗಿಗಳೆಲ್ಲ ಪೌಲನ ಬಳಿಗೆ ಬಂದರು. ಪೌಲನು ಅವರನ್ನು ಸಹ ಗುಣಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆ ಹೊಲ್ಲ್ಯಾ ಮಾನಾ ದ್ವಿಪಾತ್ಲಿ ಹುರಲ್ಲಿ ಬರೆ ನತ್ತಿ ಲೊಕಾಬಿ ಪಾವ್ಲುಕ್ಡೆ ಯೆಲಿ, ಪಾವ್ಲುನ್ ತೆಂಕಾಬಿ ಗುನ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:9
7 ತಿಳಿವುಗಳ ಹೋಲಿಕೆ  

ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.


ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.


ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.


ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು