Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು; ಮತ್ತು ಕ್ಷೇಮಹೊಂದಿದ ಆ ಮನುಷ್ಯನು ಅವರ ಕೂಡ ನಿಂತಿರುವದನ್ನು ನೋಡಿ ಪ್ರತಿಯಾಗಿ ಏನೂ ಮಾತಾಡಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೊ ಸೊಟ್ಟೊ ಪೆದ್ರು ಅನಿ ಜುವಾಂವಾಚ್ಯಾ ವಾಂಗ್ಡಾ ಇಬೆ ಹೊತ್ತೊ ಥೈತ್ಲ್ಯಾ ಲೊಕಾನಿ ಬಗಲ್ಲ್ಯಾನಿ ತಸೆ ಹೊವ್ನ್ ತ್ಯಾ ಅಪೊಸ್ತಲಾಕ್ನಿ ವಿರೊಧ್ ಹೊವ್ನ್ ತೆಂಚ್ಯಾಕ್ಡೆ ಕಾಯ್ಬಿ ಸಾಂಗುಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:14
7 ತಿಳಿವುಗಳ ಹೋಲಿಕೆ  

ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು.


ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.


“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು