ಅಪೊಸ್ತಲರ ಕೃತ್ಯಗಳು 4:16 - ಕನ್ನಡ ಸಮಕಾಲಿಕ ಅನುವಾದ16 “ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆನಿ “ ಹ್ಯಾ ಮಾನಸ್ಸಾಕ್ನಿ ಅಮಿ ಅತ್ತಾ ಕಾಯ್ ಕರುವಾ? ಹೆನಿ ಕರಲ್ಲೆ ಮೊಟ್ಟೆ ಚಮತ್ಕಾರ್ ಜೆರುಜಲೆಮಾತ್ ಹರ್ ಎಕ್ಲ್ಯಾಕ್ಬಿ ಗೊತ್ತ್ ಹೊತ್ಯಾ ಸಾಟ್ನಿ ಹೆ ಝುಟೆ ಮನುನ್‍ಬಿ ಸಾಂಗುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |