ಅಪೊಸ್ತಲರ ಕೃತ್ಯಗಳು 4:18 - ಕನ್ನಡ ಸಮಕಾಲಿಕ ಅನುವಾದ18 ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, “ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು,” ಎಂದು ಕಟ್ಟಪ್ಪಣೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರನ್ನು ಕರೆಯಿಸಿ - ಆ ಯೇಸುವಿನ ಹೆಸರನ್ನು ಎತ್ತಿ ಹೇಗೂ ಮಾತಾಡಬಾರದು, ಉಪದೇಶ ಮಾಡಲೂಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಯೆಹೂದ್ಯನಾಯಕರು ಪೇತ್ರ ಮತ್ತು ಯೋಹಾನರನ್ನು ಮತ್ತೆ ಒಳಗೆ ಕರೆಸಿ, ಯೇಸುವಿನ ಹೆಸರಿನಲ್ಲಿ ಏನೂ ಹೇಳಬಾರದೆಂದೂ, ಏನೂ ಬೋಧಿಸಬಾರದೆಂದೂ ಎಚ್ಚರಿಕೆ ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಸೆ ಹೊವ್ನ್ ಲೊಕಾನಿ ಪೆದ್ರುಕ್, ಅನಿ ಜುವಾಂವಾಕ್, ಪರ್ತುನ್ ಭುತ್ತುರ್ ಬಲ್ವುಲ್ಯಾನಿ, ಅನಿ ಜೆಜುಚ್ಯಾ ನಾಂವಾನ್ ತುಮಿ ಕಾಯ್ಬಿ ಸಾಂಗುಚೆ ನ್ಹಯ್, ಅನಿ ಕಸ್ಲಿಬಿ ಶಿಕಾಪಾ ದಿವ್ಚೆ ನ್ಹಯ್ ಮನುನ್ ಹುಶ್ಯಾರ್ಕಿ ದಿಲ್ಯಾನಿ. ಅಧ್ಯಾಯವನ್ನು ನೋಡಿ |