Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:26 - ಕನ್ನಡ ಸಮಕಾಲಿಕ ಅನುವಾದ

26 ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಹ್ಯಾ ಜಗಾತ್ಲೆ ರಾಜಾ ಸಗ್ಳ್ಯೆ ಝಗ್ಡೊ ಕರುಕ್ ತಯಾರ್ ಹೊವ್ನ್ ಹಾತ್; ಧನಿಯಾಕ್ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಮುಂಖಡಾ ಸಗ್ಳ್ಯಿ ಗೊಳಾ ಹೊವ್ನ್ ಯೆಲಾತ್ ಮನುನ್ ಸಾಂಗುಕ್ ಲಾವ್ಲೈ ನ್ಹಯ್ ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:26
14 ತಿಳಿವುಗಳ ಹೋಲಿಕೆ  

ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”


“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,


ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?


ಅದಕ್ಕೆ ಸಾರ್ವಭೌಮ ಯೆಹೋವ ದೇವರು, “ ‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು