Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:30 - ಕನ್ನಡ ಸಮಕಾಲಿಕ ಅನುವಾದ

30 ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಪವಿತ್ರ್ ಜೆಜುಚ್ಯಾ ನಾಂವಾನ್ ರೊಗಾತ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್ ಅಜಾಪಾಚಿ ಅನಿ ಚಮತ್ಕಾರಾಚಿ ಕಾಮಾ ಕರುಕ್ ತುಜೊ ಹಾತ್ ಫಿಡೆ ಕರ್ ಮನುನ್ ತೆನಿ ಮಾಗ್ನಿ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:30
19 ತಿಳಿವುಗಳ ಹೋಲಿಕೆ  

ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.


ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.


ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.


“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು