Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:34 - ಕನ್ನಡ ಸಮಕಾಲಿಕ ಅನುವಾದ

34 ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರಲ್ಲಿ ಕೊರತೆಯಿದ್ದವರು ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರಲ್ಲಿ ಕೊರತೆಪಡುವವನು ಒಬ್ಬನೂ ಇರಲಿಲ್ಲ, ಯಾಕಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆಂಕಾ ಪಾಜೆ ಹೊಲ್ಲೆ ಸಗ್ಳೆ ಸೆತ್, ಘರ್ ಧಾರ್ ಹರ್ ಎಕ್ಲೊಬಿ ತೆ ಇಕುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:34
14 ತಿಳಿವುಗಳ ಹೋಲಿಕೆ  

ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.


ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.


ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.


ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ಸದ್ಯದಲ್ಲಿ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುವುದು. ಅನಂತರ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದು. ಆಗ ಸಮಾನತೆಯ ಗುರಿಯು ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು