ಅಪೊಸ್ತಲರ ಕೃತ್ಯಗಳು 5:10 - ಕನ್ನಡ ಸಮಕಾಲಿಕ ಅನುವಾದ10 ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣಬಿಟ್ಟಳು. ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿರುವದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಗಂಡನ ಮಗ್ಗುಲಲ್ಲಿ ಹೂಣಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತನ್ನಾ ತಾಬೊಡ್ತೊಬ್ ಸಾಫಿರಾಬಿ ತೆಜಾ ಪಾಂಯಾಂಚ್ಯಾ ಫಿಡ್ಯಾತ್ ಪಡುನ್ ಜಿವ್ ಸೊಡ್ಲಿನ್, ತಿ ದಾಂಡ್ಗಿ ಲೊಕಾ ಭುತ್ತುರ್ ಯೆವ್ನ್ ಬಗ್ತಾನಾ ತಿ ಬಿ ಮರುನ್ ಪಡಲ್ಲಿ ತೆನಿ ತೆಕಾ ಉಕ್ಲುನ್ ಘೆವ್ನ್ ಜಾವ್ನ್ ತಿಚ್ಯಾ ಘವಾಚ್ಯಾ ಭಾಜುಕ್ ಮಾಟಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |