Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:11 - ಕನ್ನಡ ಸಮಕಾಲಿಕ ಅನುವಾದ

11 ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಡೀ ಧರ್ಮಸಭೆಯೂ ಇದನ್ನು ಕೇಳಿದ ಎಲ್ಲರೂ ಭಯಭ್ರಾಂತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಸರ್ವಸಭೆಗೂ ಈ ಸಂಗತಿಗಳನ್ನು ಕೇಳಿದವರೆಲ್ಲರಿಗೂ ಮಹಾ ಭಯಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಸಂಗತಿಗಳ ಬಗ್ಗೆ ಕೇಳಿದ ವಿಶ್ವಾಸಿಗಳೆಲ್ಲರೂ ಮತ್ತು ಜನರೆಲ್ಲರೂ ಭಯಗ್ರಸ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಆಯ್ಕಲ್ಲೆ ದೆವಾಚಿ ಲೊಕಾ ಅನಿ ಸಗ್ಳ್ಯಿ ಲೊಕಾಬಿ ಲೈ ಘಾಬರ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:11
14 ತಿಳಿವುಗಳ ಹೋಲಿಕೆ  

ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ


ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.


ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು