Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:12 - ಕನ್ನಡ ಸಮಕಾಲಿಕ ಅನುವಾದ

12 ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ಜನರಲ್ಲಿ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಸಗ್ಳಿ ಲೊಕಾ ಚಮತ್ಕಾರಾಚಿ ಅನಿ ಅಜಾಪಾಚಿ ಕಾಮಾ ಕರ್‍ಲ್ಯಾನಿ ಸಗ್ಳ್ಯಾ ಲೊಕಾನಿ ತೆಂಚಿ ಕಾಮಾ ಬಗ್ಲ್ಯಾನಿ ತೆನಿ ಸಗ್ಳಿ ಲೊಕಾ ಎಕ್ ಕಡೆ ಗೊಳಾ ಹೊವ್ನ್ ಸೊಲೊಮೊನಾಚ್ಯಾ ಮಾಟ್ವಾತ್ ಮಿಳುನ್ ಯಯ್ತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:12
22 ತಿಳಿವುಗಳ ಹೋಲಿಕೆ  

ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.


ನಾನು ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ, ಮಹತ್ಕಾರ್ಯಗಳನ್ನೂ ನಡೆಸುವುದರಲ್ಲಿ ಸರ್ವ ಸಹನೆಯಲ್ಲಿಯೂ ಸತ್ಯ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳನ್ನು ನಿಮ್ಮ ನಡುವೆ ತೋರಿಸಿದೆನು.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು.


ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.


ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.


ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.


ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.


ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.


ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.


ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು