Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:23 - ಕನ್ನಡ ಸಮಕಾಲಿಕ ಅನುವಾದ

23 “ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕಾವಲಿನ ಮನೆ ಪೂರ್ಣ ಭದ್ರವಾಗಿ ಮುಚ್ಚಿರುವದನ್ನೂ ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಬಂಧಿಖಾನೊ ದಾಪಲ್ಲೊ ಹೊತ್ತೊ, ಅನಿ ಚಾವಿ ಲಾವಲ್ಲಿ ಹೊತ್ತಿ ರಾಕ್ವಾಲಿ ದಾರಾಚ್ಯಾ ಜಗ್ಗೊಳ್ ಇಬೆ ಹೊತ್ತೆ, ಖರೆ ಅಮಿ ಧಾರ್ ಕಾಡುನ್ ಬಗಲ್ಲ್ಯಾ ತನ್ನಾ ಬಂದಿಖಾನೊ ಖಾಲಿ ಹೊತ್ತೊ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:23
13 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,


ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,


ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು