Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:24 - ಕನ್ನಡ ಸಮಕಾಲಿಕ ಅನುವಾದ

24 ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದೇವಾಲಯದ ಅಧಿಪತಿಯೂ ಮಹಾಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನಾದೀತೋ ಎಂದು ಕಳವಳಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಗುಡಿಚ್ಯಾ ರಾಕ್ವಾಲ್ಯಾಂಚೊ ಮುಖಂಡ್ ಅನಿ ಮುಖ್ಯ್ ಯಾಜಕಾ ಹೆ ಆಯ್ಕಲ್ಯಾ ಮಾನಾ ಅಪೊಸ್ತಲಾಕ್ನಿ ಕಾಯ್ ಹೊವ್ಕ್ ಫಿರೆ ಮನುನ್ ಅಜಾಪ್ ಹೊಲ್ಲ್ಯಾನಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:24
17 ತಿಳಿವುಗಳ ಹೋಲಿಕೆ  

ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.


ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.


ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.


ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.


ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?


ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


“ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.


ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು