Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲಾಗಿ ಯಾರೋ ಒಬ್ಬನು ಬಂದು - ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಾನಾ ಅನಿ ಎಕ್ಲ್ಯಾನ್ ಯೆವ್ನ್ ತೆಂಕಾ, “ಆಯ್ಕಾ! ತುಮಿ ಬಂದಿಖಾನ್ಯಾತ್ ಘಾಟಲ್ಲಿ ಮಾನ್ಸಾ ಗುಡಿತ್ ಇಬೆ ರಾವ್ನ್ ಲೊಕಾಕ್ನಿ ಶಿಕ್ವುಲಾತ್” ಮನುನ್ ಸಾಂಗಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:25
8 ತಿಳಿವುಗಳ ಹೋಲಿಕೆ  

ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.


ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.


“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.


ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.


ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು