Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:27 - ಕನ್ನಡ ಸಮಕಾಲಿಕ ಅನುವಾದ

27 ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆ ಮಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೈನಿಕರು ಅಪೊಸ್ತಲರನ್ನು ಸಭೆಗೆ ಕರೆದುಕೊಂಡು ಬಂದು ಯೆಹೂದ್ಯನಾಯಕರ ಮುಂದೆ ನಿಲ್ಲಿಸಿದರು. ಪ್ರಧಾನಯಾಜಕನು ಅಪೊಸ್ತಲರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತೆನಿ ಅಪೊಸ್ತಲಾಕ್ನಿ ತಾಂಡ್ಯಾಚ್ಯಾ ಜಗ್ಗೊಳ್ ಬಲ್ವುನ್ ಹಾನುನ್ ಜುದೆವಾಂಚ್ಯಾ ಮುಖಂಡಾಚ್ಯಾ ಫಿಡ್ಯಾತ್ ಇಬೆ ಕರ್‍ಲ್ಯಾನಿ ಮಹಾ ಯಾಜಕಾನಿ ಅಪೊಸ್ತಲಾಕ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:27
8 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.


ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.


ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.


ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,


ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.


ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು