Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:41 - ಕನ್ನಡ ಸಮಕಾಲಿಕ ಅನುವಾದ

41 ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹಿ ಅಪೊಸ್ತಲಾ ನ್ಯಾಯ್ ಕರ್ತಲ್ಯಾ ಸಭೆತ್ನಾ ಬಾಯ್ರ್ ಗೆಲೆ ಜೆಜುಚ್ಯಾ ನಾಂವಾ ಸಾಟ್ನಿ ಅವಮಾನ್ ಕರುನ್ ಘೆವ್ಕ್ ಅಮಿಬಿ ಸಕ್ತಾಂವ್ ಮನುನ್ ಕುಶಿ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:41
18 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.


ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.


ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.


ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಏಕೆಂದರೆ ಅವರು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ. ಅವಿಶ್ವಾಸಿಗಳಿಂದ ಏನೂ ತೆಗೆದುಕೊಳ್ಳುವವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು