Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:14 - ಕನ್ನಡ ಸಮಕಾಲಿಕ ಅನುವಾದ

14 ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ನಜರೆತಾತ್ಲೊ ಜೆಜು ಹಿ ಗುಡಿ ಪಾಡ್ವುನ್ ಮೊಯ್ಜೆಚೆ ಖಾಯ್ದೆ ಬದಲ್ತಾ ಮನುನ್ ಹ್ಯೊ ಮಾನುಸ್ ಸಾಂಗುಕ್ ಲಾಗಲ್ಲೆ ಅಮಿ ಆಯಿಕ್ಲಾಂವ್” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:14
33 ತಿಳಿವುಗಳ ಹೋಲಿಕೆ  

ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.


ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.


ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.


ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.


ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.


ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.


“ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.


“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.


ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.


ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು