Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:2 - ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯಮಂಡಲಿಯನ್ನು ಕೂಡಿಸಿ - ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುತ್ತಿರುವದು ತಕ್ಕದ್ದಲ್ಲವಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಬಾರಾ ಲೊಕಾ ಅಪೊಸ್ತಲಾನಿ ಸಗ್ಳ್ಯಾ ಶಿಸಾಂಚೊ ತಾಂಡೊ ಎಕಾಕ್ಡೆ ಬಲ್ವುನ್ ತೆಂಕಾ,ದೆವಾಚ್ಯಾ ಗೊಸ್ಟಿಯಾ ಶಿಕ್ವುತಲ್ಯಾಚ್ಯಾ ಬದ್ಲಾಕ್ ಪೈಶ್ಯಾ ಪಾನಿಯಾಚೆಚ್ ವಿಶಯ್ ಘೆವ್ನ್ ಅಮಿ ಬಸ್ತಲೆ ಸಮಾ ನ್ಹಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:2
10 ತಿಳಿವುಗಳ ಹೋಲಿಕೆ  

ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು.


ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.


ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು