Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:7 - ಕನ್ನಡ ಸಮಕಾಲಿಕ ಅನುವಾದ

7 ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ದೆವಾಚಿ ಗೊಸ್ಟಿಯಾ ಲೈ ಲೊಕಾಕ್ನಿ ಜಾವ್ನ್ ಪಾವುಕ್‍ ಲಾಗ್ಲಿ, ಜೆರುಜಲೆಮಾತ್ಲ್ಯಾ ಶಿಸಾಂಚೊ ತಾಂಡೊ ಲೈ ವಾಡುನ್ಗೆತ್‍ ಯೆಲೊ, ಲೈ ಜುದೆವಾಂಚ್ಯಾ ಯಾಜಕಾನಿ ವಿಶ್ವಾಸ್ ಕರ್‍ಲ್ಯಾನಿ ಅನಿ ಮಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:7
25 ತಿಳಿವುಗಳ ಹೋಲಿಕೆ  

ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.


ದೇವರ ವಾಕ್ಯವಾದರೋ ವೃದ್ಧಿಯಾಗುತ್ತಾ ಪ್ರಸಾರಗೊಂಡಿತು.


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.


ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.


ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.


ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.


ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.


ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.


ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.


ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’ ”


ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.


ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು