Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಕೋಬನು ಐಗುಪ್ತದೇಶಕ್ಕೆ ಬಂದು. ಅಲ್ಲಿ ಅವನೂ ಮತ್ತು ನಮ್ಮ ಪೂರ್ವಿಕರೂ ತೀರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಅವನೂ ನಮ್ಮ ಪಿತೃಗಳೂ ತೀರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ಯಾಕೋಬನು ಈಜಿಪ್ಟಿಗೆ ಹೋದನು. ಯಾಕೋಬನು ಮತ್ತು ನಮ್ಮ ಪಿತೃಗಳು ತಾವು ಸಾಯುವವರೆಗೆ ಅಲ್ಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾನಾ ಜಾಕೊಬ್ ಇಜಿಪ್ತ್ ದೆಶಾಕ್ ಗೆಲೊ, ಅಮ್ಚ್ಯಾ ಪುರ್ವಜಾಂಚೆ ಮ್ಹರಾನ್ ಹೊಯ್ ಪತರ್ ಬಿ ತೆನಿ ಥೈಚ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:15
13 ತಿಳಿವುಗಳ ಹೋಲಿಕೆ  

ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.


ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.


ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.


ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.


ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.


ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.


ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.


ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.


ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು.


ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.


ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು