Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:17 - ಕನ್ನಡ ಸಮಕಾಲಿಕ ಅನುವಾದ

17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವ ಕಾಲವು ಸಮೀಪಿಸಿತು. ಈಗಾಗಲೇ ಈಜಿಪ್ಟ್ ದೇಶದಲ್ಲಿ ನಮ್ಮ ಜನರ ಸಂಖ್ಯೆ ಅಧಿಕವಾಗಿ ಬೆಳೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಹತ್ತರಕ್ಕೆ ಬರುತ್ತಿರುವಾಗ ನಮ್ಮ ಜನರು ಐಗುಪ್ತದೇಶದಲ್ಲಿ ಹೆಚ್ಚಿ ಬಹಳವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ದೆವಾನ್ ಅಬ್ರಾಹಾಮಾಕ್ ದಿಲ್ಲಿ ಗೊಸ್ಟ್ ಫುರಾ ಹೊತಲೊ ಯೆಳ್ ಜಗ್ಗೊಳ್ ಯೆಲ್ಲೊ, ಅನಿ ಇಜಿಪ್ತ್ ದೆಶ್ಯಾತ್ ಹೊತ್ತ್ಯಾ ಅಮ್ಚ್ಯಾ ಲೊಕಾಂಚೊ ಅಂಕೊ ಲೈ ವಾಡುಂಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:17
8 ತಿಳಿವುಗಳ ಹೋಲಿಕೆ  

ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;


ಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು.


ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.


ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು