Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:38 - ಕನ್ನಡ ಸಮಕಾಲಿಕ ಅನುವಾದ

38 ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅರಣ್ಯದಲ್ಲಿ ಯೆಹೂದ್ಯರ ಸಮೂಹದೊಂದಿಗೆ ಇದ್ದವನು ಈ ಮೋಶೆಯೇ. ಸಿನಾಯ್ ಬೆಟ್ಟದ ಬಳಿ ತನ್ನೊಂದಿಗೆ ಮಾತಾಡಿದ ದೇವದೂತನೊಂದಿಗೆ ಅವನಿದ್ದನು. ಅಲ್ಲದೆ ಅವನು ನಮ್ಮ ಪಿತೃಗಳೊಂದಿಗೆ ಇದ್ದನು. ಜೀವಕರವಾದ ಆಜ್ಞೆಗಳನ್ನು ಮೋಶೆಯು ದೇವರಿಂದ ಸ್ವೀಕರಿಸಿಕೊಂಡು ಅವುಗಳನ್ನು ನಮಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಮೊಯ್ಜೆ ಡಂಗ್ಳಿತ್ ಇಸ್ರಾಯೆಲ್ ಲೊಕಾಂಚೊ ತಾಂಡೊ ಗೊಳಾ ಹೊಲ್ಲ್ಯಾ ತನ್ನಾ ತೆಂಚ್ಯಾ ವಾಂಗ್ಡಾ ಹೊತ್ತೊ, ಪುರ್ವಜಾಂಚ್ಯಾ ವಾಂಗ್ಡಾ ಬೊಲಲ್ಯಾ ದೆವ್ ದುತಾಚ್ಯಾ ವಾಂಗ್ಡಾ ಹೊತ್ತೊ, ಅನಿ ತೆನಿ ದೆವಾಚಿ ಜಿವ್ ಹೊತ್ತಿ ಗೊಸ್ಟಿಯಾ ಅಮ್ಕಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:38
26 ತಿಳಿವುಗಳ ಹೋಲಿಕೆ  

ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಯಾಕೋಬನ ಸಂತತಿಯವರಾದ ನಮಗೆ, ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.


ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.


“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು