Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:52 - ಕನ್ನಡ ಸಮಕಾಲಿಕ ಅನುವಾದ

52 ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತುಮ್ಚ್ಯಾ ಪುರ್ವಜಾನಿ ತರಾಸ್ ದಿಸ್ತಾನಾ ಸೊಡಲೊ ಪ್ರವಾದಿ ಕೊನ್ ಹಾಯ್? ಅನಿ ತೆನಿ ತ್ಯಾ ನಿತಿವಂತಾಚ್ಯಾ ಯೆನ್ಯಾಚ್ಯಾ ಅದ್ದಿಚ್ ಬರಿ ಖಬರ್ ಸಾಂಗಲ್ಲ್ಯಾಕ್ನಿ ಜಿವ್ ಕಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:52
32 ತಿಳಿವುಗಳ ಹೋಲಿಕೆ  

ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.


ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.


“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.


ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.


“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.


ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.


ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:


ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.


“ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.


ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ


ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು