Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:56 - ಕನ್ನಡ ಸಮಕಾಲಿಕ ಅನುವಾದ

56 “ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 “ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಅಗೋ, ಆಕಾಶವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವದನ್ನೂ ನೋಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 “ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

56 ಅನಿ “ಹೆಬಕ್, ಸರ್ಗ್‍ ಉಗಡಲ್ಲೆ ಅನಿ ಮಾನ್ಸಾಚೊ ಲೆಕ್ ದೆವಾಚ್ಯಾ ಉಜ್ಜ್ಯಾ ಬಾಜುಕ್ ಇಬ್ಬೆ ಹೊತ್ತ್ಯೆ ಮಿಯಾ ಬಗುಲ್ಲಾ!” ಮನುನ್ ಸಾಂಗಲಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:56
17 ತಿಳಿವುಗಳ ಹೋಲಿಕೆ  

ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.


ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.


ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.


ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.


ಹೀಗೆ ಮೂರು ಸಾರಿ ನಡೆದಮೇಲೆ, ಕೂಡಲೇ ಆ ಜೋಳಿಗೆಯನ್ನು ಪರಲೋಕಕ್ಕೆ ಎತ್ತಿಕೊಳ್ಳಲಾಯಿತು.


ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.


ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.


ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.


ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು