Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:58 - ಕನ್ನಡ ಸಮಕಾಲಿಕ ಅನುವಾದ

58 ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಅವನನ್ನು ಪಟ್ಟಣದಿಂದ ಹೊರಗೆ ಎಳೆದೊಯ್ದು, ಅವನು ಸಾಯುವವರೆಗೂ ಅವನ ಮೇಲೆ ಕಲ್ಲುಗಳನ್ನು ಎಸೆದರು. ಸ್ತೆಫನನ ವಿರುದ್ಧವಾಗಿ ಸುಳ್ಳು ಹೇಳಿದ ಜನರು ತಮ್ಮ ಮೇಲಂಗಿಗಳನ್ನು ಬಿಚ್ಚಿ ಸೌಲನೆಂಬ ಯುವಕನಿಗೆ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತೆಕಾ ಶಾರಾತ್ನಾ ಭಾಯ್ರ್ ವಡುನ್ ನೆವ್ನ್, ತೊ ಮರಿ ಪತರ್ ಬಿ ತೆಚ್ಯಾ ವೈರ್ ಗುಂಡೆ ಟಾಕ್ಲ್ಯಾನಿ ಸ್ತೆಪನಾಕ್ ವಿರೊಧ್ ಹೊವ್ನ್ ಸಾಕ್ಷಿ ಸಾಂಗಲ್ಲ್ಯಾ ಲೊಕಾನಿ, ಅಪ್ಲಿ ವೈಲಿ ಅಂಗಿಯಾ ಕಾಡುನ್ ಸಾವ್ಲು ಮನ್ತಲ್ಯಾ ದಾಂಡ್ಗ್ಯಾ ಮಾನ್ಸಾಚ್ಯಾ ಪಾಂಯಾತ್ನಿ ಥವ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:58
17 ತಿಳಿವುಗಳ ಹೋಲಿಕೆ  

ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.


ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು,


ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.


ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.


ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.


ಅವರು ಅರಚುತ್ತ ತಮ್ಮ ಮೇಲಂಗಿಗಳನ್ನು ಹರಿಯುತ್ತ ಗಾಳಿಯಲ್ಲಿ ಮಣ್ಣು ತೂರುತ್ತಿರಲು,


ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು