Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:60 - ಕನ್ನಡ ಸಮಕಾಲಿಕ ಅನುವಾದ

60 ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ತೆನಿ ಡಿಂಬಿಯಾರ್ನಿ ಇಬೆ ರ್‍ಹಾವ್ನ್, “ಧನಿಯಾ, ಹ್ಯೊ ಪಾಪ್ ಹೆಂಚ್ಯಾ ವೈರ್ ಘಾಲು ನಕ್ಕೊ!” ಮನುನ್ ಮೊಟ್ಯಾ ಧನಾನ್ ಸಾಂಗುನ್ಗೆತ್ ಜಿಂವ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:60
23 ತಿಳಿವುಗಳ ಹೋಲಿಕೆ  

ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.


ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.


ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.


ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.


ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.


ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.


ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,


ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು