Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಕ್ಕೆ ಸೀಮೋನನು - ನೀವು ಹೇಳಿರುವ ಸಂಗತಿಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ಸಿಮಾವಾನ್ ಮಾಜ್ಯಾ ಸಾಟ್ನಿ ತುಮಿ ದೊಗೆಬಿ ಧನಿಯಾಕ್ಡೆ ತುಮಿ ಸಾಂಗಲ್ಲ್ಯಾ ಸಂಗ್ತಿಯಾತ್ನಿ ಎಕ್ಬಿ ಮಾಕಾ ಹೊವ್ಕ್ ನ್ಹಯ್ ಸಾರ್ಕೆ ಮಾಗ್ನಿ ಕರಾ! ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:24
15 ತಿಳಿವುಗಳ ಹೋಲಿಕೆ  

ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.


ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.


ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.


ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.


ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.


ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.


ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.


ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು