Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:25 - ಕನ್ನಡ ಸಮಕಾಲಿಕ ಅನುವಾದ

25 ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇವಿುಗೆ ಹಿಂತಿರಿಗಿ ಹೊರಟು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆಚ್ಯಾ ಮಾನಾ ಪೆದ್ರು ಅನಿ ಜುವಾಂವಾಕ್ ಅಪ್ನಿ ಆಯ್ಕಲ್ಲಿ ಜೆಜುಚಿ ಖಬರ್ ಸಗ್ಳ್ಯಾ ಲೊಕಾಕ್ನಿ ಕಳ್ವುಲ್ಯಾನಿ, ತೆನಿ ಲೊಕಾಕ್ನಿ ಧನಿಯಾಚಿ ಬರಿ ಖಬರ್ ಸಾಂಗುನ್, ಮಾನಾ ಜೆರುಜಲೆಮಾಕ್ ಜಾತಾನಾ ವಾಟೆರ್ ಸಮಾರ್ಯಾತ್ಲಾ ಲೈ ಗಾಂವಾಕ್ನಿ ಜಾವ್ಕ್ ಲೊಕಾಕ್ನಿ ದೆವಾಚಿ ಬರಿ ಖಬರ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:25
14 ತಿಳಿವುಗಳ ಹೋಲಿಕೆ  

ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.


ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.


ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು