Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:28 - ಕನ್ನಡ ಸಮಕಾಲಿಕ ಅನುವಾದ

28 ಈಗ ತನ್ನ ಮನೆಗೆ ಹಿಂತಿರುಗುತ್ತಿದ್ದಾಗ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ದೇವಾರಾಧನೆಗೋಸ್ಕರ ಯೆರೂಸಲೇವಿುಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತುಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೊ ಅಪ್ಲ್ಯಾ ರಥಾತ್ ಬಸುನ್ ಯೆಶಾಯಾಚೆ ಪುಸ್ತಕ್ ವಾಚುನ್ಗೆತ್ ಅಪ್ಲ್ಯಾ ಘರಾಕ್ಡೆ ಪರ್ತುನ್ ಜಾವ್‍ಲಾಗಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:28
19 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:


ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.


ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.


ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು