Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:30 - ಕನ್ನಡ ಸಮಕಾಲಿಕ ಅನುವಾದ

30 ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, “ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?” ಎಂದು ಫಿಲಿಪ್ಪನು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಫಿಲಿಪ್ಪನು ಓಡಿ ಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ - ಎಲೈ, ನೀನು ಓದುವದು ನಿನಗೆ ತಿಳಿಯುತ್ತದೋ? ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಸಾಂಗಲ್ಲ್ಯಾ ಸಾರ್ಕೆಚ್ ಫಿಲಿಪ್ ರಥಾಚ್ಯಾ ಜಗ್ಗೊಳ್ ಗೆಲೊ, ತೊ ಮಾನುಸ್ ವಾಚುಲಾಗಲೆ ಯೆಶಾಯಾಚೆ ಪ್ರವಾದನ್ ಪುಸ್ತಕ್ ಫಿಲಿಪಾಕ್‍ಬಿ ಆಯ್ಕಲೆ, ತನ್ನಾ ಫಿಲಿಪಾನ್ ತೆಕಾ ತಿಯಾ ವಾಚುಲಾಗಲೆ ತುಕಾ ಅರ್ತ್‍ ಹೊವ್ಲಾ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:30
18 ತಿಳಿವುಗಳ ಹೋಲಿಕೆ  

ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.


ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ.


ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”


ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.


“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.


ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.


ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.


ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಫಿಲಿಪ್ಪನು ಸಮಾರ್ಯದ ಒಂದು ಪಟ್ಟಣಕ್ಕೆ ಹೋಗಿ ಅಲ್ಲಿ ಕ್ರಿಸ್ತ ಯೇಸುವಿನ ಸಂದೇಶ ಸಾರಿದನು.


ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.


ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು