Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:35 - ಕನ್ನಡ ಸಮಕಾಲಿಕ ಅನುವಾದ

35 ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಫಿಲಿಪ್ಪನು ಉಪದೇಶಿಸುವದಕ್ಕೆ ತೊಡಗಿ ಅದೇ ವಚನವನ್ನು ಆಧಾರ ಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಫಿಲಿಪಾನ್ ಪವಿತ್ರ್ ಪುಸ್ತಕಾಚ್ಯಾ ಹ್ಯಾ ಭಾಗಾಕ್ನಾಚ್ ಶುರು ಕರುನ್ ಜೆಜುಚ್ಯಾ ವಿಶಯಾಚಿ ಖಬರ್ ತೆಕಾ ಕಳ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:35
20 ತಿಳಿವುಗಳ ಹೋಲಿಕೆ  

ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.


ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.


ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.


ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:


ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.


ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.


ಕೊರಿಂಥದವರೇ, ನಾವು ನಿಮ್ಮೊಂದಿಗೆ ಮುಚ್ಚುಮರೆಯಿಲ್ಲದೆ ಹೇಳಿಕೊಂಡೆವು, ನಮ್ಮ ಹೃದಯವನ್ನು ನಿಮ್ಮೊಂದಿಗೆ ವಿಶಾಲವಾಗಿ ತೆರೆದಿದ್ದೇವೆ.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.


ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.


ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.


ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.


ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು